ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ

ಕರ್ನಾಟಕ ರಾಜ್ಯ ಮಾದ್ಯಮಿಕ ಶಿಕ್ಷಕ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ’ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧಾರವಾಡ ಕೆ ಇ ಬೋರ್ಡ್ ಸೆಂಟ್ರಲ್ ಸ್ಕೂಲ್‌ನಲ್ಲಿ ಆತ್ಮೀಯವಾಗಿ ಸ್ವಾಗತಸಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಧಾರವಾಡ ಟ್ಯುಟೋರಿಯಲ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಪ್ರೊ ನಾಗೇಶ್ ಅಣ್ಣಿಗೇರಿ, ಕಾರ್ಯಕ್ರಮದ ಸಂಚಾಲಕರಾದ ಶ್ರೀ ವಿನಾಯಕ್ ಜೋಶಿ, ಶ್ರೀ ಸುಧೀಂದ್ರ ದೇಶಪಾಂಡೆ, ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನೀರ್ಸ್, ಲೋಕಲ್ ಸೆಂಟರ್ ಧಾರವಾಡ ಅಧ್ಯಕ್ಷರಾದ ಶ್ರೀ ಸುನಿಲ್ ಬಾಗೇವಾಡಿ, ಕಾರ್ಪೊರೇಟರ್ ಶ್ರೀ ವಿಷ್ಣು ಕೊಲ್ಲಹಳ್ಳಿ,ಸುಭೋದ ಶಿಕ್ಷಣ ಸಮಿತಿ ಅಧ್ಯಕ್ಷರಾದ ಶ್ರೀ ಗಿರಿಧರ್ ಕಿನ್ನಾಳ, ಕೆ ಈ ಬೋರ್ಡ್ ಸಂಸ್ಥೆಯ ಕಾರ್ಯದರ್ಶಿ ಶ್ರೀ ರಾಜ ಪುರೋಹಿತ್, ಶ್ರೀ ರಮೇಶ ಚನ್ನಣ್ಣವರ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಾದ್ಯಮಿಕ ಶಿಕ್ಷಕ ಸಂಘದ ವತಿಯಿಂದ ಹುಬ್ಬಳ್ಳಿ ನಗರದ ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಪಿ.ಯು ಕಾಲೇಜಿನಲ್ಲಿ ಆರಂಭವಾದ ದ್ವಿತೀಯ ಪಿಯು ಪರೀಕ್ಷೆಗೆ ಗುಲಾಬಿ ಹೂ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ ರವೀಂದ್ರನಾಥ ದಂಡಿನ, ಉದ್ಯಮಿಗಳಾದ ಶ್ರೀ ಬಸವರಾಜ ಬಿಂಗಿ, ಶಿಕ್ಷಣ ತಜ್ಞರಾದ ಶ್ರೀನಿವಾಸ ಕುಲಕರ್ಣಿ, ಪ್ರಾಚಾರ್ಯ ಸಂದೀಪ ಬೂದಿಹಾಳ ಮತ್ತು ಇತರರು ಉಪಸ್ಥಿತರಿದ್ದರು.

Highslide for Wordpress Plugin