ಶಿಕ್ಷಕರ ಮತ್ತು ಶೈಕ್ಷಣಿಕ ಸಮಸ್ಯೆಗಳ ಚರ್ಚೆ

ಬೆಂಗಳೂರ ಸಮಗ್ರ ಶಿಕ್ಷಣ ಅಭಿಯಾನ ಕಟ್ಟಡದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ “ಶಿಕ್ಷಕರ ಮತ್ತು ಶೈಕ್ಷಣಿಕ ಸಮಸ್ಯೆಗಳ “ ಕುರಿತಂತೆ ಚರ್ಚಿಸಲಾಯಿತು.

ಸಭೆಯಲ್ಲಿ ಮಾನ್ಯ ಎಸ್. ಸುರೇಶ ಕುಮಾರ ಸರ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಕಾರ್ಯಾಧ್ಯಕ್ಷರಾದ & ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀ ಅರುಣ್ ಶಹಾಪುರ, ಕ್ಯಾ. ಗಣೇಶ್ ಕಾರ್ಣಿಕ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಉಮಾ ಶಂಕರ್, ಆಯುಕ್ತರಾದ ಡಾ. ಜಗದೀಶ್, ಎಚ್. ನಾಗಭೂಷಣ್ ರಾವ್, ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಅಧ್ಯಕ್ಷರಾದ ಸಂದೀಪ ಬೂದಿಹಾಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಪಾಟೀಲ, ಸಹ ಪ್ರಧಾನ ಕಾರ್ಯದರ್ಶಿ ಗಂಗಾಧರಾಚಾರಿ, ಶ್ರೀಮತಿ ಸೀತಾಲಕ್ಷ್ಮೀ, ರಾಜ್ಯ ಉಪಾಧ್ಯಕ್ಷರಾದ ಬಿ.ಹೆಚ್. ವರದರಾಜು, ರಾಜ್ಯ ಖಜಾಂಚಿಗಳಾದ ಜೆ. ಎಂ. ಜೋಶಿ ಮತ್ತು ವಿಭಾಗ ಪ್ರಮುಖರಾದ ಮಲ್ಲಿಕಾರ್ಜುನ ಕೂಡಗಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Highslide for Wordpress Plugin