ರಾಜ್ಯ ಸರ್ಕಾರ 7ನೇ ವೇತನ ಆಯೋಗದಲ್ಲಿ ನವೋದಯ ಮತ್ತು ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಶಿಕ್ಷಕರಿಗೆ ಒಂದು ರಾಷ್ಟ್ರ, ಒಂದು ವೇತನ ಜಾರಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.
ಮಾಧ್ಯಮಿಕ ಶಿಕ್ಷಕ ಸಂಘದ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಬೊಮ್ಮಾಯಿ ಅವರಿಗೆ ಸಮಸ್ಯೆಗಳ ಪಟ್ಟಿಯನ್ನು ಸಲ್ಲಿಸಿದೆ. ಶಿಕ್ಷಣ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಬಜೆಟ್‌ನಲ್ಲಿ ಪರಿಗಣಿಸುವ ಭರವಸೆ ನೀಡಿದ್ದಾರೆ. ಪ್ರಮುಖವಾಗಿ ಓಪಿಎಸ್ ಜಾರಿ, 1995 ರ ನಂತರ ಆರಂಭವಾದ ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ನಿಯೋಗದಲ್ಲಿ ಸಂಘದ ರಾಜ್ಯಾಧ್ಯಕ್ಷ ಸಂದೀಪ್ ಬೂದಿಹಾಳ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಪಾಟಿಲ್, ಕೋಶಾಧ್ಯಕ್ಷರಾದ ಜೆ ಎಂ ಜೋಷಿ, ಸಹ ಪ್ರಧಾನ ಕಾರ್ಯದರ್ಶಿಗಳಾದ ಗಂಗಾಧರ ಅಚಾರಿ, ಬಿ. ಎ ಸುರೇಂದ್ರ ಹಾಜರಿದ್ದರು.