ಯುಗಾದಿ ಹೊಸ ವರ್ಷದ ದಿನದರ್ಶಿಕೆ ಬಿಡುಗಡೆ, ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಮರ್ಪಣೆ ಮತ್ತು ABRSM ರಾಷ್ಟ್ರೀಯ ಅಧಿವೇಶನದಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮ
ದಿನಾಂಕ 25-3-2023 ರ ಶನಿವಾರ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಸಹಯೋಗದಲ್ಲಿ ಶ್ರೀ ಶೋಭಕೃತ್ ನಾಮ ಸಂವತ್ಸರದ ಯುಗಾದಿ ಹೊಸವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ, 2022-23 ೩ನೇ ಶೈಕ್ಷಣಿಕ ಸಾಲಿನ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮಿಕೊಳ್ಳಲಾಗಿದ್ದ ಫೋನ್‌ಇನ್ ಕಾರ್ಯಕ್ರಮದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಮರ್ಪಣೆ ಮತ್ತುABRSM ರಾಷ್ಟ್ರೀಯ ಅಧಿವೇಶನದಲ್ಲಿ ಉತ್ಸುಕರಾಗಿ ಭಾಗವಹಿಸಿ ಯಶಸ್ವಿಯಾಗಿ ನೆರವೇರಿಸಿದ ಕಾರ್ಯಕರ್ತರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮವು ಶೇಷಾದ್ರಿಪುರಂನಲ್ಲಿರುವ ಯಾದವಸ್ಮೃತಿಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷರಾದ ಶ್ರೀ ನಾರಾಯಣ ಭಟ್ಟರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಬೆಂಗಳೂರು ಉತ್ತರ ಜಿಲ್ಲೆಯ ಕಾರ್ಯದರ್ಶಿಗಳಾದ ಶ್ರೀ ಹರಿದಾಸ್‌ರವರು ಗಣೇಶ ಸ್ತುತಿಯನ್ನು ನೆರವೇರಿಸಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಕೂಡಗಿರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರನ್ನೂ ಹಾರ್ದಿಕವಾಗಿ ಸ್ವಾಗತಿಸಿದರು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರವಲಯ-3ರ ಅಧ್ಯಕ್ಷರಾದ ಶ್ರೀ ಗಂಗಾಧರ.ಎಂ.ವಿರವರು ಕಾರ್ಯಕ್ರಮದ ನಿರೂಪಣೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಟ್ಟರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಖಜಾಂಚಿಗಳಾದ ಶ್ರೀ ಜೆ.ಎಂ ಜೋಷಿರವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಶಿಕ್ಷಕ ಸಂಘವು ಬೆಳೆದು ಬಂದ ರೀತಿ ಪ್ರತಿ ಶೈಕ್ಷಣಿಕ ವರ್ಷದಲ್ಲಿ ಸಂಘದ ಮುಖಾಂತರ ನಡೆಸುವ ಎಲ್ಲಾ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಹಿರಿಯರು, ಮಾರ್ಗದರ್ಶಕರು, ಪೋಷಕರಾದ ಶ್ರೀಯುತ ಹೆಚ್‌ನಾಗಭೂಷಣ ರಾವ್‌ರವರು ಯುಗಾದಿ ಹೊಸ ವರ್ಷದ ದಿನದರ್ಶಿಕೆಯನ್ನು ಅನಾವರಣಗೊಳಿಸಿ ನಮ್ಮ ಸಂಸ್ಕೃತಿಯ ಬಗ್ಗೆ ಮಾತನಾಡುತ್ತಾ ನಾವು ಯುಗಾದಿಯಲ್ಲಿ ಹೊಸ ವರ್ಷಾಚರಣೆ ಏಕೆ ಮಾಡುತ್ತಿದ್ದೇವೆ ಎಂಬುದನ್ನು ವೈಜ್ಞಾನಿಕ ಕಾರಣಗಳಿಮದ ವಿವರಿಸಿದರು. ನಮ್ಮ ಪ್ರಕೃತಿಯು ಸಹ ಯುಗಾದಿಯ ಜೊತೆ ಯಾವ ರೀತಿ ಸ್ಪಂದಿಸುತ್ತಿದೆ ಎಂದು ತಿಳಿಸುತ್ತಾ ಯುಗಾದಿ ಹೊಸವರ್ಷದ ದಿನದರ್ಶಿಕೆಯ ಮಹತ್ವವನ್ನು ವಿವರಿಸಿದರು.
ನಂತರ ವೇದಿಕೆಯ ಮೇಲಿರುವ ಗಣ್ಯರಾದ ಶ್ರೀಯುತ ಹೆಚ್ ನಾಗಭೂಷಣರಾವ್‌ರವರು ಮತ್ತು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಮಹಿಳಾ ಪ್ರಮುಖರಾದ ಶ್ರೀಮತಿ ಸೀತಾಲಕ್ಷ್ಮಿಯವರು ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಮರ್ಪಣೆ ನೆರವೇರಿಸಿದರು. ಶಿಕ್ಷಕರ ವಿವರಗಳನ್ನು ಬೆಂಗಳೂರು ಉತ್ತರ ವಲಯ-೩ರ ಕಾರ್ಯದರ್ಶಿಯವರಾದ ಶ್ರೀ ಕಿರಣ್ ಕುಮಾರ್.ಎಸ್ ರವರು ನೀಡಿದರು. ಗೌರವ ಸಮರ್ಪಣೆಯನ್ನು ಮಾಡಿದ ಶ್ರೀಮತಿ ಸೀತಾಲಕ್ಷ್ಮಿಯವರು ಮಾತನಾಡಿ ಈ ಕಾರ್ಯಕ್ರಮವು ತುಂಬಾ ಅಚ್ಚುಕಟ್ಟಾಗಿ ಮೂಡಿ ಬಂದಿದೆ ಮತ್ತು ಹೆಚ್ಚಿನ ಶಿಕ್ಷಕರು ಪಾಲ್ಗೊಂಡಿರುವುದು ತುಂಬಾ ಸಂತಸವಾಗಿದೆ ಎಂದು ತಿಳಿಸಿದರು. ಸಂಪನ್ಮೂಲ ಶಿಕ್ಷಕರಾದ ಶ್ರೀ ನಾರಾಯಣ ಭಟ್‌ರವರು ಮತ್ತು ಶ್ರೀಮತಿ ಮಂಜುರೂಪರವರು ತಮ್ಮ ಅನಿಸಿಕೆಯಲ್ಲಿ ತಾವು ಫೋನ್‌ಇನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಯಾವ ರೀತಿ ಚರ್ಚೆಗಳನ್ನು ಮಾಡಿ ಅವರ ಸಂದೇಹಗಳಿಗೆ ಪರಿಹಾರಗಳನ್ನು ನೀಡಿದರು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ, ರಾಜ್ಯ ಸಹ ಕಾರ್ಯದರ್ಶಿಯವರಾದ ಶ್ರೀ ಗಂಗಾಧರಾಚಾರಿಯವರು ಶಿಕ್ಷಕ ಸಂಘದ ಮಹತ್ವವನ್ನು ವಿವರಿಸಿದರು. ರಾಷ್ಟ್ರದ ಹಿತಕ್ಕಾಗಿ ಶಿಕ್ಷಣ, ಶಿಕ್ಷಣದ ಹಿತಕ್ಕಾಗಿ ಶಿಕ್ಷಕ, ಶಿಕ್ಷಕನ ಹಿತಕ್ಕಾಗಿ ಸಮಾಜ ಯಾವ ರೀತಿ ಸ್ಪಂದಿಸುತ್ತಿದೆ ಎಂದು ತಿಳಿಸಿದರು. ನಂತರ ABRSM ರಾಷ್ಟ್ರೀಯ ಅಧಿವೇಶನದ ಯಶಸ್ಸಿಗೆ ಕಾರಣಕರ್ತರಾದ ಕಾರ್ಯಕರ್ತರಿಗೆ ವೇದಿಕೆಯ ಮೇಲಿನ ಗಣ್ಯರು ಅಭಿವಂದನಾ ಪತ್ರ ವಿತರಿಸಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಬೆಂಗಳೂರು ಉತ್ತರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಯ ವಿಭಾಗ ಪ್ರಮುಖರಾದ ಶ್ರೀ ಗಂಗಪ್ಪರವರು ಂಃಖSಒ ರಾಷ್ಟ್ರೀಯ ಅಧಿವೇಶನ ಕಾರ್ಯಕ್ರಮದ ಮತ್ತು ಕಾರ್ಯಕರ್ತರ ವಿವರಗಳನ್ನು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕಾರ್ಯದರ್ಶಿಗಳಾದ ಶ್ರೀ ವೆಂಕಟರಮಣ ದೇವರ ಭಟ್‌ರವರು ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಬೆಂಗಳೂರು ಉತ್ತರ ಜಿಲ್ಲೆಯ ಕಾರ್ಯದರ್ಶಿ ಶ್ರೀ ಹರಿದಾಸ್‌ರವರ ಶಾಂತಿಮಂತ್ರಿದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.