ಕಪ್ಪು ಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

ಜೇವರ್ಗಿ : ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜೇವರ್ಗಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ಶಿಕ್ಷಕರು ಗುರುವಾರ ತಾಲ್ಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ನಂತರ ಕರ್ತವ್ಯ ನಿರ್ವಹಿಸಿದರು.

protest

protest1

ಶಿಕ್ಷಕರ ವೇತನ ತಾರತಮ್ಯ ಸರಿಪಡಿಸಬೇಕು. ಕಾಲ್ಪನಿಕ ವೇತನ ಬಡ್ತಿ ನೀಡಬೇಕು ಶಾಲಾ, ಕಾಲೇಜುಗಳಿಗೆ ಅನುದಾನ ನೀಡಬೇಕು, ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು.

7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ವರ್ಗಾವಣೆ ನೀತಿಯಲ್ಲಿ ಬದಲಾವಣೆ ತರಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ತಾಲ್ಲೂಕಿನ 12 ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಕಪ್ಪು ಪಟ್ಟಿ ಧರಿಸಿ ಪರೀಕ್ಷೆ ಕರ್ತವ್ಯ ನಿರ್ವಹಿಸಿದರು.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ವಿಭಾಗ ಪ್ರಮುಖ ಮಹೇಶ್ ಬಸರಕೋಡ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಜೋಶಿ, ರವಿ ಜಾದವ, ಸಿದ್ದು ಕಕ್ಕಳಮೇಲಿ, ಅಬ್ದುಲ್ ಕರೀಮಸಾಬ್, ಶಾಂತಪ್ಪ, ಬಿರಾದಾರ, ಎಸ್.ಬಸಣ್ಣ, ಬಲವಂತರಾಯ, ಧನಸಿಂಗ್ ರಾಠೋಡ, ಬಸವರಾಜ ಕುಂಬಾರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ಸಾಂಕೇತಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Highslide for Wordpress Plugin