ಭಾರತೀಯ ಪರಂಪರೆಯಲ್ಲಿ ಗುರುಗಳಿಗೆ ಪೂಜ್ಯ ಸ್ಥಾನವಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಅದು ಕಡಿಮೆಯಾಗುತ್ತಿದೆ ಎಂದು ಶಾಸಕ ಎಸ್.ಎ ರಾಮದಾಸ್ ವಿಷಾದಿಸಿದರು.
ಗೋಪಾಲಸ್ವಾಮಿ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಮತ್ತು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶೈಕ್ಷಿಕ್ ಸಂಘವು ಆಯೋಜಿಸಿದ್ದ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಯಿಯ ನಂತರದ ಸ್ಥಾನದಲ್ಲಿ ಗುರು ಎಂಬುದನ್ನು ವಿದ್ಯಾರ್ಥಿಗಳು ಅರಿತು, ಅವರ ಗೌರವಕ್ಕೆ ಧಕ್ಕೆ ಎಂಬುದನ್ನು ವಿದ್ಯಾರ್ಥಿಗಳು ಅರಿತು, ಅವರ ಗೌರವಕ್ಕೆ ಧಕ್ಕೆ ತಾರದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾಧ್ಯಾಪಕಿ ಡಾ|| ಜ್ಯೋತಿ ಶಂಕರ್ ಮಾತನಾಡಿ, ಭಾರತೀಯ ಸಮಾಜದಲ್ಲಿ ಇರುವ ಗುರು ಶಿಷ್ಯರ ಪರಂಪರೆ ಬೇರೆಲ್ಲೂ ಇಲ್ಲ. ಈ ಪರಂಪರೆಯನ್ನು ಮರೆತರೆ ನಮ್ಮ ಸಮಾಜದ ಗೌರವ ಕಡಿಮೆಯಾಗುತ್ತದೆ. ಒಬ್ಬ ವಿದ್ಯಾರ್ಥಿಯನ್ನು ಜನ ಮೆಚ್ಚುವ ಉತ್ತಮ ವ್ಯಕ್ತಿಯಾಗಿ ಮಾಡುವಲ್ಲಿ ಗುರುವಿನ ಹೊಣೆ ಹೆಚ್ಚಿದೆ ಎಂದರು.
ಇದೇ ವೇಳೆ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಎಸ್.ನಂದೀಶ್, ರಾಜ್ಯ ಮಹಾವಿದ್ಯಾಲಯದ ಶೈಕ್ಷಿಕ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿಂಧನಕೇರಾ, ಜಿಲ್ಲಾಧ್ಯಕ್ಷ ಪ್ರೊ|| ಕೆ ಆರ್.ವೀರಯ್ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ ಸಿ ರಾಜಣ್ಣ ಉಪಸ್ಥಿತರಿದ್ದರು.