38 ನೆಯ ಪ್ರತಿಭಾ ಪುರಸ್ಕಾರ – ಬೆಂಗಳೂರು ದಕ್ಷಿಣ ಜಿಲ್ಲೆ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ವತಿಯಿಂದ ದಿನಾಂಕ ೧೦-೮-೨೦೨೫ರಂದು ಸತತವಾದ ೩೮ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬೆಂಗಳೂರು ಎನ್.ಆರ್. ಕಾಲೋನಿಯ ಎ.ಪಿ.ಎಸ್ ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮ ಶ್ರೀಮತಿ ಮಾಯಾಪ್ರಭುರವರಿಂದ ಸರಸ್ವತಿ ವಂದನೆಯೊಂದಿಗೆ ಆರಂಭವಾಗಿ ವೇದಿಕೆಯ ಗಣ್ಯರಿಂದ ಜ್ಯೋತಿ ಬೆಳಗಿಸುವ ಹಾಗೂ ಶಾರದಾಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮುಖಾಂತರ ಉದ್ಘಾಟಿಸಲ್ಪಟ್ಟಿತು. ಸಂಘದ ರಾಜ್ಯ ಖಜಾಂಚಿಗಳಾದ ಶ್ರೀ ಸುರೇಂದ್ರರವರು ವೇದಿಕೆ ಗಣ್ಯರನ್ನು ಪರಿಚಯಿಸಿ ಸ್ವಾಗತಿಸಿದರು ಹಾಗೂ ಆಗಮಿಸಿದ ಪಾಲಕ, ಶಿಕ್ಷಕ, ವಿದ್ಯಾರ್ಥಿಗಳನ್ನು […]











