ವಿಧಾನ ಪರಿಷತ್ತಿನಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರಶ್ನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಉತ್ತರ
1. ರಾಜ್ಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಸರ್ಕಾರ ಯಾವ ಯೋಜನೆಗಳನ್ನು ಕೈಗೊಂಡಿದೆ; (ವಿವರ ನೀಡುವುದು) ಉತ್ತರ: ಸರ್ವ ಶಿಕ್ಷಣ ಅಭಿಯಾನದ ಕಂಪ್ಯೂಟರ್ ಆಧಾರಿತ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಆಯ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮತ್ತು ಕೇಂದ್ರ ಪುರಸ್ಕೃತ ಐಸಿಟಿ ಯೋಜನೆಯಡಿಯಲ್ಲಿ ಆಯ್ದ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ನೀಡಲಾಗಿದೆ. 2016-17ನೇ ಸಾಲಿನಿಂದ ರಾಜ್ಯದಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ( ಟಿಎಎಲ್‌ಪಿ) ತಂತ್ರಜ್ಞಾನ ಬೆಂಬಲಿತ […]










