
ಬೆಂಗಳೂರು ಉತ್ತರ ಜಿಲ್ಲಾ ಘಟಕ : ಸಂಕಲ್ಪ ದಿನಾಚರಣೆ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ (ರಿ.) ಬೆಂಗಳೂರು ಉತ್ತರ ಜಿಲ್ಲಾ ಘಟಕವು ದಿನಾಂಕ 14-1-2018 ರ ಭಾನುವಾರದಂದು ವಿ.ಐ.ಪಿ ಶಾಲೆ, ಟಿ. ದಾಸರಹಳ್ಳಿ ಇಲ್ಲಿ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷಚಂದ್ರ ಬೋಸರ ಜಯಂತಿ ನಿಮಿತ್ತ ಸಂಕಲ್ಪ ದಿನಾಚರಣೆಯನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮ ಬೆಳಗ್ಗೆ 11 ಗಂಟೆಗೆ ವಿ.ಐ.ಪಿ ಶಾಲೆಯ ವಿದ್ಯಾರ್ಥಿನಿಯ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಜಿಲ್ಲಾ ಅಧ್ಯಕ್ಷರಾದ ಶ್ರೀ ಎಸ್.ಜಿ ತಾಂಬೆಯವರು ವೇದಿಕೆ ಮೇಲಿನ ಗಣ್ಯರನ್ನು ಸ್ವಾಗತಿಸಿ ಪರಿಚಯಿಸಿದರು. ನಂತರ ಗಣ್ಯರೆಲ್ಲರೂ ಜ್ಯೋತಿ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. […]