
37 ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ದಕ್ಷಿಣ ಜಿಲ್ಲೆಯ ವತಿಯಿಂದ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶಾಲಾ ಪ್ರಥಮಿಗರನ್ನು, ಶಿಕ್ಷಕರ ಮಕ್ಕಳನ್ನು ಹಾಗೂ ದಿವ್ಯಾಂಗರನ್ನು ಪುರಸ್ಕರಿಸುವ 37 ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿನಾಂಕ 1-8-2024 ರಂದು ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಪದವಿ ಪೂರ್ವ ವಿದ್ಯಾಲಯ ಮಲ್ಲೇಶ್ ಪಾಳ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ವೈಭವೋಪೇತ ಸಭಾಭವನದಲ್ಲಿ ಕಾರ್ಯಕ್ರಮ ಸುಂದರವಾಗಿ ಮೂಡಿ ಬಂತು. ಸಂಘದ ಹಿರಿಯ ಕಾರ್ಯಕರ್ತರಾದ […]